ಡಿ. 21ರಂದು ಶಂಭೂರಿನ ಬೊಂಡಾಲ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

Update: 2019-12-13 11:12 GMT

ಬಂಟ್ವಾಳ, ಡಿ. 13: ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ, ಸರಕಾರಿ ಪ್ರೌಢಶಾಲೆಯಲ್ಲಿ ಡಿ. 21ರಂದು ಶಾಲಾ ವಾರ್ಷಿಕೋತ್ಸವ ನಡೆಯಲಿದೆ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.

ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬೆಳಗ್ಗೆ 9.30ಕ್ಕೆ  ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಸಂಜೆ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಎಂಆರ್‍ಪಿಎಲ್, ಸಿಎಸ್‍ಆರ್ ನಿಧಿಯಿಂದ ಕೊಡಲಾದ ಸೋಲಾರ್ ಘಟಕವನ್ನು ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾಪಂ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಭಾಗವಹಿಸುವರು. 

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರಾಧಿಕಾರಿ ರಾಜಶೇಖರ ಪುರಾಣಿಕ್, ಸಾ.ಶಿ.ಇ. ಆಡಳಿತ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಉದ್ಯಮಿ ಕರುಣಾಕರನ್, ಎಂಆರ್‍ಪಿಎಲ್ ಜನರಲ್ ಮ್ಯಾನೇಜರ್ ಸುಬ್ರಾಯ ಭಟ್, ಚೀಫ್ ಮ್ಯಾನೇಜರ್ ವೀಣಾ ಟಿ.ಶೆಟ್ಟಿ, ಇನೆರ್ಜಿಯಾ ಸೋಲಾರ್ ಕನ್ಸಲ್ಟೆಂಟ್ ಮಾಧವ ಭಂಡಾರಿ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಧೀರಜ್ ಭಾಗವಹಿಸುವರು. 

ಕಾರ್ಯಕ್ರಮದಲ್ಲಿ ಜಯಗೊವಿಂದ, 2018-19 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಸರಕಾರಿ ಪ್ರೌಢಶಾಲೆಗಲಲ್ಲಿ ಅತೀ ಹೆಚ್ಚು ಅಂಕ ಪಡೆದ ಶಾಲಾ ವಿದ್ಯಾರ್ಥಿ ಜಯಗೋವಿಂದ ಅವರನ್ನು ಅಭಿನಂದಿಸಲಾಗುವುದು, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದೆಂದು ಕಾರ್ಯಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News