ಹರೇಕಳ ರಾಮಕೃಷ್ಣ ಪ್ರೌಢ ಶಾಲೆ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ

Update: 2019-12-13 11:56 GMT

ಕೊಣಾಜೆ: ಹರೇಕಳ ರಾಮಕೃಷ್ಣ ಪ್ರೌಢ ಶಾಲೆ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವವನ್ನು ಕೊಣಾಜೆ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಯೋಗೀಶ್ವರನ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಎಳವೆಯಲ್ಲೇ ವಿದ್ಯಾರ್ಥಿಗಳು ಶಿಸ್ತನ್ನು ಅಳವಡಿಸಿಕೊಂಡಾಗ ಸಮಾಜದಲ್ಲಿ ಗೌರವದಿಂದ ಬದುಕಲು ಸಾಧ್ಯ ಎಂದು ಹೇಳಿದರು.  

ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಕಂಟ್ರೋಲ್‍ಮೆಂಟ್ ವಾರ್ಡ್‍ನ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ ವಹಿಸಿದ್ದರು. 

ಹರೇಕಳ ಶಾಲೆ ಕನ್ನಡ ಮಾಧ್ಯಮವಾಗಿದ್ದರೂ ಅತೀ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಜ್ಯಮಟ್ಟದ ಸಾಧನೆ ಮಾಡಿಕೊಂಡು ಬರುತ್ತಿರುವುದು ನಿಜವಾಗಿಯೂ ಶ್ಲಾಘನೀಯ. ಕಲಿಯಲು ವಿದ್ಯಾರ್ಥಿಗಳಿಗೆ ಮಾಧ್ಯಮ ಮುಖ್ಯವಲ್ಲ, ವಿದ್ಯಾರ್ಥಿಗಳಿಗೆ ಆಸಕ್ತಿ ಮುಖ್ಯ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತ ಅದೆಷ್ಟೋ ಮಂದಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದಿರುವುದೇ ಇದಕ್ಕೆಲ್ಲಾ ಸಾಕ್ಷಿ ಎಂದರು. ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ರಾಜ್‍ಕುಮಾರ್ ಶೆಟ್ಟಿಯವರು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು. 

ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ್ ಅವರು ಧ್ವಜಾರೋಹಣಗೈದರು. ಆಡಳಿತ ಮಂಡಳಿಯ ಸದಸ್ಯರಾದ ಕಡೆಂಜ ಸೋಮಶೇಖರ್ ಚೌಟ ಅವರು ಮತ್ತು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಜಯಶ್ರೀ ಮುಖ್ಯ ಅತಿಥಿಯಾಗಿದ್ದರು. ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಂದ ಸುಂದರವಾದ ಪಥ ಸಂಚಲನ ನೆರವೇರಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಉಷಾಲತ ಎ ಸ್ವಾಗತಿಸಿ,  ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಎಡ್ವರ್ಡ್ ಐಮನ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News