ಉಡುಪಿ: ಡಿ.17ರಂದು ವಿಶ್ವ ಬಹುಭಾಷಾ ಕವಿ ಸಾಹಿತ್ಯ ಸಮ್ಮೇಳನ

Update: 2019-12-13 12:38 GMT

ಉಡುಪಿ, ಡಿ.13: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ, ಪುತ್ತೂರು ಸಾಹಿತ್ಯ ವೇದಿಕೆ, ಟೈಮ್ಸ್ ಆಫ್ ಕುಡ್ಲ, ಕಥಾಬಿಂದು ಪ್ರಕಾಶನ ಇವುಗಳ ವತಿಯಿಂದ ವಿಶ್ವ ಬಹುಭಾಷಾ ಕವಿ ಸಾಹಿತ್ಯ ಸಮ್ಮೇಳನವನ್ನು ಡಿ.17 ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.

ಮಂಗಳೂರು, ಉಡುಪಿ, ಮುಂಬೈ, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸುವ ಸುಮಾರು 60 ಮಂದಿ ಕವಿಗಳು ತುಳು, ಕನ್ನಡ, ತಮಿಳು, ಮಾಲಯಾಳಂ, ಇಂಗ್ಲಿಷ್, ಮರಾಠಿ, ಕೊಂಕಣಿ, ಸಂಸ್ಕೃತ ಭಾಷೆಗಳ ಕವಿತೆಗಳನ್ನು ವಾಚಿಸಲಿರುವರು ಎಂದು ಪುತ್ತೂರು ಸಾಹಿತ್ಯ ವೇದಿಕೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕಟ್ಟತ್ತಿಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬೆಳಗ್ಗೆ 8:30ಕ್ಕೆ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಮುಂಬೈ ಕನ್ನಡ ಸಂಘ ಮಾಟುಂಗ ಕಾರ್ಯಾಧ್ಯಕ್ಷೆ ರಜನಿ ಪೈ ಸಮ್ಮೇಳನಾಧ್ಯಕ್ಷತೆ ವಹಿಸಲಿರುವರು. ಧಾರವಾಡ ಹೈಕೋರ್ಟ್ ನ್ಯಾಯವಾದಿ, ಸಾಹಿತಿ ರೇವಣ್ಣ ಬಳ್ಳಾರಿ ಭಾಗ ವಹಿಸಲಿರುವರು. ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದಲ್ಲಿ ಭರತನಾಟ್ಯ, ತುಳು ನೃತ್ಯ ವೈವಿಧ್ಯ, ಶ್ರೀಕೃಷ್ಣಾವತಾರ ಕಥಾರೂಪಕ ಪ್ರದರ್ಶನಗೊಳ್ಳಲಿದೆ.

ಡಾ.ವಸಂತ ಕುಮಾರ್ ಪೆರ್ಲ ಅಧ್ಯಕ್ಷತೆಯಲ್ಲಿ ಕನ್ನಡ, ಗಂಗಾಧರ ಕಿದಿ ಯೂರು ಅಧ್ಯಕ್ಷತೆಯಲ್ಲಿ ತುಳು ಮತ್ತು ಶಾಂತ ಕುಂಟಿನಿ ಅಧ್ಯಕ್ಷತೆಯಲ್ಲಿ ಬಹು ಭಾಷಾ ಕವಿಗೋಷ್ಠಿ ನಡೆಯಲಿದೆ. ಅಪರಾಹ್ನ 3:30ಕ್ಕೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಲೇಖಕ ಪಿ.ವಿ.ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News