ಡಿ.15ರಂದು ಪುದುಚೇರಿ ಉಪ ರಾಜ್ಯಪಾಲೆ ಕಿರಣ್ ಬೇಡಿ ಮಂಗಳೂರಿಗೆ

Update: 2019-12-13 13:20 GMT

ಮಂಗಳೂರು, ಡಿ.13: ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಉಪರಾಜ್ಯಪಾಲೆ ಡಾ. ಕಿರಣ್ ಬೇಡಿ ಡಿ.15ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಅಪರಾಹ್ನ 3:45ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಸಂಜೆ 6:45ಕ್ಕೆ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ಡಿ.16ರಂದು ಬೆಳಗ್ಗೆ 9:35ಕ್ಕೆ ವಿಮಾನದ ಮೂಲಕ ಚೆನ್ನೈಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News