ಪೌರತ್ವ ಕಾಯ್ದೆ ವಿರುದ್ಧ ಜಾಮಿಯಾ ವಿವಿಯಲ್ಲಿ ಭಾರೀ ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ

Update: 2019-12-19 06:10 GMT
Photo: www.dnaindia.com

ಹೊಸದಿಲ್ಲಿ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಘರ್ಷಣೆಗೆ ತಿರುಗಿದೆ. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಅಶ್ರುವಾಯು ಸಿಡಿಸಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು.  ಪೊಲೀಸರು 50 ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News