ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ
Update: 2019-12-13 21:40 IST
ಉಡುಪಿ, ಡಿ.13: ಮುಂದಿನ ಜ.17-18ರಂದು ಉಡುಪಿಯಲ್ಲಿ ನಡೆಯಲಿರುವ ಅದಮಾರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅದಮಾರು ಮಠ ಪರ್ಯಾಯ ಸಮಿತಿ ಸದಸ್ಯರ ಸಮ್ಮುಖದಲ್ಲಿ ಈ ಆಮಂತ್ರಣ ಪತ್ರಿಕೆಯ್ನು ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಈ ನಿಯೋಗ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರನ್ನೂ ಭೇಟಿ ಮಾಡಿ ಪರ್ಯಾಯ ಮಹೋತ್ಸವಕ್ಕೆ ಆಹ್ವಾನ ನೀಡಿತು. ಈ ವೇಳೆ ಉಡುಪಿ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಜೊತೆಗಿದ್ದರು.