ನೇಣು ಬಿಗಿದು ಗೃಹಣಿ ಆತ್ಮಹತ್ಯೆ

Update: 2019-12-13 16:13 GMT

ಬೆಂಗಳೂರು, ಡಿ.13: ನೇಣು ಬಿಗಿದುಕೊಂಡು ಗೃಹಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಹದೇವಪುರದ ಹೂಡಿಯಲ್ಲಿ ನಡೆದಿದೆ. ಹೂಡಿ ನಗರದ ಶಿಲ್ಪಾ(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸಕೋಟೆಯ ಹಿಂಡಿಗನಾಳದ ಶಿಲ್ಪಾ,ಒಂದು ವರ್ಷದ ಹಿಂದೆ ನಾಗೇಶ್ ಎಂಬವರ ಜೊತೆ ವಿವಾಹವಾಗಿದ್ದರು. ಆದರೆ, ಗುರುವಾರ ರಾತ್ರಿ ಹೂಡಿಯಲ್ಲಿನ ಪತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ ಎನ್ನಲಾಗಿದೆ.

ಪುತ್ರಿಯ ಸಾವಿಗೆ ಪೋಷಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News