ಕಾಣೆಯಾದ ಮಕ್ಕಳು, ಮಹಿಳೆಯರ ಪಟ್ಟಿ ತಯಾರಿಸಿ: ಉಡುಪಿ ಡಿಸಿ

Update: 2019-12-13 16:44 GMT

ಉಡುಪಿ, ಡಿ.13: ಜಿಲ್ಲೆಯಲ್ಲಿ ಕಾಣೆಯಾಗಿರುವ ಮಹಿಳೆ ಮತ್ತು ಮಕ್ಕಳ ಪ್ರಕರಣಗಳು ಗಂಭೀರವಾಗಿದ್ದು, ಇದುವರೆಗೂ ಎಷ್ಟು ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗಿದ್ದಾರೆ ಎನ್ನುವ ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಸಾಗಾಣೆ ಮತ್ತು ಮಾರಾಟ ನಿಷೇಧ ಕಾಯ್ದೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಹಿಳೆಯರಿಗೆ ಉದ್ಯೋಗದ ಆಮಿಷ ಒಡ್ಡಿ ಮೋಸ ಮಾಡುವ, ಅನಧಿಕೃ ವಾಗಿ ಕಾರ್ಯ ನಿರ್ವಹಿಸುವ ಏಜೆನ್ಸಿಗಳಿದ್ದರೆ ಅವುಗಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತಂದು ಅವರಿಗೆ ಪುನರ್ವಸತಿ ಕಲ್ಪಿಸಿ, ಶಾಲೆಗೆ ಸೇರಿಸಬೇಕು. ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವ ಹೆತ್ತವರ ಜೊತೆ ಸಮಾಲೋಚನೆ ನಡೆಸಿ, ಮಕ್ಕಳು ಮತ್ತೆ ಭಿಕ್ಷಾಟನೆಯಲ್ಲಿ ತೊಡಗದಂತೆ ನೋಡಿಕೊಳ್ಳಬೇಕು. ಶಾಲೆಗೆ ಸೇರಿಸಿದ ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗುತ್ತಿದ್ದಾರೆಯೇ ಇಲ್ಲವೇ ಎನ್ನುವುದನ್ನು ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಪರಿಶೀಲಿಸೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಶಾಲೆಗೆ ಸೇರಿಸಿದ ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗುತ್ತಿದ್ದಾರೆಯೇ ಇಲ್ಲವೇ ಎನ್ನುವುದನ್ನು ಸಂಬಂಪಟ್ಟಶಾಲಾಮುಖ್ಯೋಪ್ಯಾಾಯರ ಮೂಲಕ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಬಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿವೈಎಸ್ಪಿ ಜೈಶಂಕರ್, ಡಿಡಿಪಿಐ ಶೇಷಶಯನ ಕಾರಿಂಜ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News