ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ ಬೈಕ್ ಅಪಘಾತ: ಯುವಕ ಮೃತ್ಯು, ಓರ್ವ ಗಂಭೀರ

Update: 2019-12-13 17:58 GMT

ಮೈಸೂರು,ಡಿ.13: ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಗುದ್ದಿದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಜೊತೆಯಲ್ಲಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತ ಯುವಕನನ್ನು ಡಿಆರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ದಫೇದಾರ ರಾಜಾರಾಮ್ ಅವರ ಪುತ್ರ ಜ್ಯೋತಿನಗರ ಬಿ ಬ್ಲಾಕ್ ನಿವಾಸಿ ಶ್ರೇಯಸ್(21) ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ ಬರ್ತ್ ಡೇ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬೈಕ್ ಎಸ್ಪಿ ಆಫೀಸ್ ಸರ್ಕಲ್ ಬಳಿ ತಡೆಗೋಡೆಗೆ ಬಡಿದಿದೆ. ಈ ವೇಳೆ ಶ್ರೇಯಸ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತನ ಜೊತೆಗಿದ್ದ ಹಿಂಬದಿ ಸವಾರ ಕಾರ್ತಿಕ್(22) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಿದ್ದಾರ್ಥ ನಗರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಿದ್ದಾರ್ಥ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News