ಸಿದ್ದರಾಮಯ್ಯರನ್ನು ಭೇಟಿಯಾದ ಎಚ್.ವಿಶ್ವನಾಥ್, ಜಿ.ಟಿ.ದೇವೇಗೌಡ

Update: 2019-12-14 08:49 GMT

ಬೆಂಗಳೂರು, ಡಿ.14: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಶಾಸಕ ಎಚ್.ವಿಶ್ವನಾಥ್ ಹಾಗೂ ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿರುವ ಸಿದ್ದರಾಮಯ್ಯರನ್ನು ಇಂದು ಭೇಟಿಯಾದ ಎಚ್. ವಿಶ್ವನಾಥ್ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಕೆ.ಬಿ.ಕೋಳಿವಾಡ ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News