ಮನೆ ಕೆಲಸದಾಕೆಯ ಅತ್ಯಾಚಾರ ಆರೋಪ: ಶಿಕ್ಷಕನ ಬಂಧನ

Update: 2019-12-14 15:51 GMT

ಬೆಂಗಳೂರು, ಡಿ.14: ಮನೆ ಕೆಲಸದಾಕೆಯನ್ನು ಗೃಹಬಂಧನದಲ್ಲಿಟ್ಟು ದೈಹಿಕ ಹಿಂಸೆ ಹಾಗೂ ಅತ್ಯಾಚಾರ ನಡೆಸಿದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಕೋರಮಂಗಲದ 8ನೇ ಕ್ರಾಸ್‌ನಲ್ಲಿ ಉರ್ದು ಪರ್ಷಿಯನ್ ಟ್ಯುಟೋರಿಯಲ್ ನಡೆಸುತ್ತಿದ್ದ ಫರ್ವೆಝ್(40) ಬಂಧಿತ ಆರೋಪಿ. ಈತ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತ ಯುವತಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಸಂಬಂಧ ಆರೋಪಿ ಫರ್ವೇಝ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News