ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಪ್ರತಿಭಟನೆ

Update: 2019-12-19 06:41 GMT

ಶಿವಮೊಗ್ಗ, ಡಿ.14: ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸುನ್ನಿ ಜಮೀಯತುಲ್ ಉಲಮಾ ಕಮಿಟಿಯು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಅರ್ಪಿಸಿತು.

ಪೌರತ್ವ ನೀಡುವ ವಿಷಯದಲ್ಲಿ ಧಾರ್ಮಿಕ ನೆಲೆಗಟ್ಟು ಬಳಕೆ ಮಾಡಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾದುದಾಗಿದೆ. ಇದೊಂದು ಜನವಿರೋಧಿ ಕಾಯ್ದೆಯಾಗಿದೆ. ಮುಸ್ಲಿಂ ಸಮುದಾಯವನ್ನು ಬಲಿಪಶು ಮಾಡುವ ಹುನ್ನಾರ ಅಡಗಿದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕಾನೂನಿನ ಮೂಲಕ, ಕೋಮು ಧ್ರುವೀಕರಣದ ವ್ಯವಸ್ಥಿತ ಹುನ್ನಾರ ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದು ಸಮಾಜದ ಸಹಬಾಳ್ವೆ-ಸೌಹಾರ್ದಕ್ಕೆ ಧಕ್ಕೆ ತರುವಂತದ್ದಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಲಭಿಸಿರುವುದು ನಿಜಕ್ಕೂ ಖಂಡನಾರ್ಹ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News