ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರ

Update: 2019-12-14 18:11 GMT

ಬಂಟ್ವಾಳ, ಡಿ. 14: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರವು ಹೆಣ್ಣೂರುಪದವು ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನಾಯಕತ್ವ ಬೆಳೆಸುವಲ್ಲಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಎನ್ನೆಸ್ಸೆಸ್ ಯುವ ಜನರಲ್ಲಿ ದೇಶಾಭಿಮಾನ ಬೆಳೆಸುವ ರಾಷ್ಟ್ರೀಯತೆಯನ್ನು ಬಿಂಬಿಸುವ ಕಾರ್ಯ ನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎನ್ನೆಸ್ಸೆಸ್ ಮೂಲಕ ಪ್ರಾಮಾಣಿಕ ವ್ಯಕ್ತಿಗಳಾಗಿ ದೇಶ ಸೇವೆ ಮಾಡಬೇಕು ಎಂದು ಹೇಳಿದರು. 

ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಮಾತನಾಡಿ, ಎನ್ನೆಸ್ಸೆಸ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಸಮಾಜದಿಂದ ಗುರುತಿಸಲ್ಪಡುವ ಕೆಲಸಗಳನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹಿತ ನುಡಿದರು. 

ಕುಕ್ಕಿಪಾಡಿ ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಸುಂದರ ಶಾಂತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್‍ರವರು ಎನ್‍ಎಸ್‍ಎಸ್ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. 

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂದೇಶ್ ಶೆಟ್ಟಿ. ಎಪಿಎಂಸಿ ಮಾಜಿ ಸದಸ್ಯ ರತ್ನ ಕುಮಾರ್ ಚೌಟ, ರೋಟರಿ ಕ್ಲಬ್ ಅಧ್ಯಕ್ಷ ಪದ್ಮರಾಜ್ ಬಳ್ಳಾಲ್, ದ.ಕ.ಜಿ.ಪ.ಹಿ.ಪ್ರಾ ಶಾಲೆ ಹೆಣ್ಣೂರು ಪದವು ಇದರ ಮುಖ್ಯ ಶಿಕ್ಷಕ ವಿಜಯ ಭಂಡಾರಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ನಸೀಮಾ ಬೇಗಂ ಎಸ್. ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಎಸ್.ಪಿ ಶ್ರೀಧರ್, ಎನ್ನೆಸ್ಸೆಸ್ ಯೋಜನಾಧಿಕಾರಿ ದೇವಿಪ್ರಸಾದ್, ಸಹ ಶಿಬಿರಾಧಿಕಾರಿ ಡಾ. ಶ್ರೀನಿವಾಸ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪೂವಪ್ಪ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸೇಸಪ್ಪ ಪೂಜಾರಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಸದಸ್ಯ ಲಿಂಗಪ್ಪ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರೇಖಾ, ರೋಟರಿ ಕ್ಲಬ್ ಸದಸ್ಯ ಸೀತಾರಾಮ ಶೆಟ್ಟಿ, ಎನ್ನೆಸ್ಸೆಸ್ ಘಟಕದ ನಾಯಕರಾದ ದಿನೇಶ್ ಕೆ. ಉಪಸ್ಥಿತರಿದ್ದರು. 

ಶಿಬಿರಾರ್ಥಿ ಮನೀಶ್ ಪ್ರಾರ್ಥಿಸಿ, ಶಿಬಿರದ ನಾಯಕ ಗುರುಪ್ರಸಾದ್ ಸ್ವಾಗತಿಸಿ, ಶಿಬಿರಾರ್ಥಿಯಾದ ಪ್ರಜ್ವಲ್ ವಂದಿಸಿದರು. ಎನ್ನೆಸ್ಸೆಸ್ ಘಟಕದ ನಾಯಕಿ ನೀಮಾ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News