"ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ: ಡಿ.20ರಂದು ಸಿಎಂ ಮನೆಗೆ ಮುತ್ತಿಗೆ"

Update: 2019-12-14 18:23 GMT

ಬೆಂಗಳೂರು, ಡಿ.14: ರಾಜ್ಯ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಡಿ.20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬಿ. ನರಸಪ್ಪ ದಂಡೋರ ತಿಳಿಸಿದ್ದಾರೆ.

ಶನಿವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.20ರಂದು ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸುವುದರ ಜತೆಗೆ ವರದಿಯನ್ನು ಸದನದಲ್ಲಿ ಅತೀ ಶೀಘ್ರದಲ್ಲಿ ಚರ್ಚಿಸಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಡಿ.20 ರಂದು ಬೃಹತ್ ಪ್ರತಿಭಟನೆ ಮೂಲಕ ಡಾಲರ್ಸ್ ಕಾಲನಿಯ ಎಂ.ಎಸ್. ರಾಮಯ್ಯ ಆಸ್ಪತ್ರೆ ಮೂಲಕ ಸಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಪ್ರತಿಭಟನೆಯಲ್ಲಿ ಮಾದಿಗ ಜನಾಂಗದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News