ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ : ಅಸ್ಸಾಂನಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ
Update: 2019-12-15 10:12 IST
ಗುವಾಹಟಿ, ಡಿ.15: ಅಸ್ಸಾಂನಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ.
ಡಿಸೆಂಬರ್ 12 ರಂದು ಪೊಲೀಸ್ ಗಂಡೇಟಿಗೆ ಗಾಯಗೊಂಡಿದ್ದ ಪ್ರತಿಭಟನಾಕಾರ ಪೈಕಿ ಒಬ್ಬರು ಇಂದು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೂಡ ಹೆಚ್ಚಾಗಿದೆ. ರೈಲ್ವೆ ನಿಲ್ದಾಣಗಳು ಮತ್ತು ಹಳಿಗಳು, ಮತ್ತು ನಿನ್ನೆ ಕನಿಷ್ಠ 25 ಬಸ್ಸುಗಳಿಗೆ ಬೆಂಕಿ ಹಚ್ಚಿದ್ದಾರೆ
ಅಸ್ಸಾಂನಾದ್ಯಂತ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿರುವುದನ್ನು ಡಿಸೆಂಬರ್ 16 ರವರೆಗೆ 48 ಗಂಟೆಗಳ ಕಾಲ ವಿಸ್ತರಿಸಲಾಗಿದ್ದರೂ, ದಿಬ್ರುಗರ್ , ಗುವಾಹಟಿ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ.