ಮಕ್ಕಳು ಪ್ರಶ್ನೆ ಕೇಳುವುದರಿಂದ ಸಮಸ್ಯೆಗಳಿಗೆ ಪರಿಹಾರ: ಶೋಭಾ ಪುತ್ರನ್

Update: 2019-12-15 14:46 GMT

ಕುಂದಾಪುರ, ಡಿ.15: ಉಡುಪಿ ಜಿಲ್ಲಾ ಮತ್ತು ಕುಂದಾಪುರ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ, ಮಂಗಳೂರು ಪಡಿ ಸಂಸ್ಥೆ ಹಾಗೂ ಗಂಗೊಳ್ಳಿ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಮಾಸೋತ್ಸವದ ಉದ್ಘಾಟನಾ ಸಮಾರಂಭವನ್ನು ರವಿವಾರ ಉರ್ದು ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿದ ಉಡುಪಿ ಜಿಪಂ ಸದಸ್ಯೆ ಶೋಭಾ ಪುತ್ರನ್ ಮಾತನಾಡಿ, ಮಕ್ಕಳು ಮೊದಲು ಭಯ ಮುಕ್ತರಾಗಿ ಪ್ರಶ್ನೆಗಳನ್ನು ಕೇಳಬೇಕು. ಆಗ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಮಕ್ಕಳ ಮಾಸೋತ್ಸವ ಕಾರ್ಯಕ್ರಮ ಎಲ್ಲಾ ಶಾಲೆಗಳಲ್ಲಿ ನಡೆಯಬೇಕು ಮತ್ತು ಮಕ್ಕಳು ಶಿಸ್ತಿನ ಬಗ್ಗೆ ಮಹ್ವ ಕೊಡಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೋಟ ಪಡುಕರೆಯ ಲಕ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಪ್ರಮೀಳಾ ಜೆ.ವಾಜ್ ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯ ಹಾಗೂ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ, ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಸೈ ರಘುರಾಮ್, ಸಂಪನ್ಮೂಲ ಕೇಂದ್ರದ ಉಡುಪಿ ತಾಲೂಕು ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ಮಾತನಾಡಿದರು.

ಗಂಗೊಳ್ಳಿ ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ಫಾಜೀಲ್, ಜಿಲ್ಲಾ ಚೈಲ್ಡ್ ಲೈನ್ ಕೇಂದ್ರ ಸಂಯೋಜಕಿ ಕಸ್ತೂರಿ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನ, ಗ್ರಾಪಂ ಸದಸ್ಯ ನಾಗರಾಜ್ ಎನ್., ಶಿಕ್ಷಣ ಸಂಪನ್ಮೂಲ ಕೇಂದ್ರ ಕುಂದಾಪುರ ತಾಲೂಕು ಉಪಾಧ್ಯಕ್ಷೆ ಜ್ಯೋತಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಹಮ್ಮದ್ ರವೂಫ್, ವಿಧ್ಯಾರ್ಥಿ ಮುಖಂಡ ಎ.ಕೆ.ಫಾಜೀಲ್, ತಾಲೂಕು ಸಂಯೋಜಕಿ ಅನಿತಾ, ಫಾರ್‌ನಾಜ್ ಉಪಸ್ಥಿತರಿದ್ದರು.

ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷ ತಿಲೋತ್ತಮ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕ ವಿವೇಕ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News