ಡಿ.18ರಿಂದ ಹೆಲ್ತ್ ಕಾರ್ಡ್ ನೋಂದಣಿ

Update: 2019-12-15 15:07 GMT

ಮಂಗಳೂರು, ಡಿ.15: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 5ನೇ ವಾರ್ಡ್ ಹಾಗೂ ಕರ್ನಾಟಕ ಒನ್ ಸಹಯೋಗದೊಂದಿಗೆ 4 ದಿನಗಳ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಗುರುತಿನ ಚೀಟಿ (ಹೆಲ್ತ್ ಕಾರ್ಡ್) ನೋಂದಣಿ ಮತ್ತು ವಿತರಣೆ ಕಾರ್ಯಕ್ರಮವು ಡಿ.18ರಿಂದ ಜರುಗಲಿದೆ.

ಡಿ.18,19ರಂದು ಚೊಕ್ಕಬೆಟ್ಟು 8ನೆ ಬ್ಲಾಕ್‌ನ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಮತ್ತು ಡಿ.20,21ರಂದು ಕೃಷ್ಣಾಪುರ 7ನೆ ಬ್ಲಾಕ್‌ನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ 35 ರೂ. ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News