ಉಡುಪಿ ಜಿಲ್ಲಾ ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ : 4.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Update: 2019-12-15 21:33 IST
ಉಡುಪಿ, ಡಿ.15: ಅಜ್ಜರಕಾಡಿನಲ್ಲಿರುವ ಉಡುಪಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ ಅವರ ವಸತಿ ಗೃಹದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಡಿ.15ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿ.ಎಂ.ಜೋಶಿ ಅವರ ಪತ್ನಿ ಶೈಲಜಾ ಜೋಶಿ ಎಂಬವರು ನ.28ರಂದು ಬೆಳಗ್ಗೆ ಕಪಾಟಿನ ಡ್ರಾವರ್‌ನಲ್ಲಿಟ್ಟಿದ್ದ ಒಡವೆಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವುದಕ್ಕಾಗಿ ಡ್ರಾವರ್ ತೆಗೆದು ನೋಡಿದಾಗ ಅದರಲ್ಲಿದ್ದ ಚಿನ್ನದ ಒಡವೆಗಳ ಡಬ್ಬಿ ಕಾಣೆಯಾಗಿರುವುದು ಕಂಡುಬಂದಿದೆ.
ನ.11ರಿಂದ ನ.28ರ ಮಧ್ಯಾವಧಿಯಲ್ಲಿ ಇದನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. 4.80 ಲಕ್ಷ ರೂ. ಮೌಲ್ಯದ ಒಟ್ಟು 138 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಶೈಲಜಾ ನೀಡಿದ ದೂರಿ ನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.