ಡಿ.16: ‘ಹಿಫ್’ನಿಂದ ಪತ್ರಕರ್ತರೊಂದಿಗೆ ಸಮ್ಮಿಲನ

Update: 2019-12-15 16:23 GMT

ಮಂಗಳೂರು, ಡಿ.15: ಹೈಲ್ಯಾಂಡ್ ಇಸ್ಲಾಮಿಕ್ ಫೋರಮ್ (ಹಿಫ್) ಮಂಗಳೂರು ಇದರ ವತಿಯಿಂದ ಡಿ.16ರಂದು ಮಧ್ಯಾಹ್ನ 12 ಗಂಟೆಗೆ ನಗರದ ಉರ್ವದಲ್ಲಿರುವ ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭ ಪ್ರವಾದಿ ಮುಹಮ್ಮದ್ (ಸ)ಅವರ ಕುರಿತಾಗಿ ಉಪನ್ಯಾಸ ನಡೆಯಲಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಹಿಫ್ ಅಧ್ಯಕ್ಷ ಸಾಜಿದ್ ಎ.ಕೆ. ಪಾಲ್ಗೊಳ್ಳಲಿದ್ದಾರೆ ಎಂದು ಸೀರತ್ ಕಾರ್ಯಕ್ರಮದ ಸಂಚಾಲಕ ಆದಿಲ್ ಫರ್ವೀಝ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News