ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2019-12-15 18:29 GMT

ಬೆಂಗಳೂರು, ಡಿ.15: ವಾಯುಕ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಖಾಲಿಯಿರುವ ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಿಗಮ ವ್ಯಾಪ್ತಿಯಲ್ಲಿನ 9 ವಿಭಾಗ ವ್ಯಾಪ್ತಿಯಲ್ಲಿ 2,555 ಚಾಲಕ ಹುದ್ದೆಗಳು ಖಾಲಿಯಿದ್ದು, ಅದರಲ್ಲಿ 55 ಪರಿಶಿಷ್ಟ ಜಾತಿ, ಹಿಂಬಾಕಿ ವರ್ಗಕ್ಕೆ ಸೇರಿದವರಿಗೆ ಮೀಸಲಿರಿಸಲಾಗಿದೆ. ಜೊತೆಗೆ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಕ್ಕೆ ಸೇರಿದವರಿಗೆ 259 ಚಾಲಕ ಕಂ ನಿರ್ವಾಹಕ ಹುದ್ದೆ ಖಾಲಿಯಿವೆ. ಒಟ್ಟು 2,814 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 2020ರ ಜನವರಿ 8ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ WWW.nwkrtc.in ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News