ಜಾಮಿಯಾ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ನದ್ವಾ ಕಾಲೇಜು ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

Update: 2019-12-19 08:40 GMT

ಲಕ್ನೋ, ಡಿ. 16: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಿಂಸಾತ್ಮಕ ಧರಣಿ ನಡೆದ ಒಂದು ದಿನದ ಬಳಿಕ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಲಕ್ನೋದ ನಾದ್ವಾ ಕಾಲೇಜಿನಲ್ಲಿ ಪ್ರತಿಭಟನೆ ನಡೆಯಿತು.

 ಪೊಲೀಸರು ಪ್ರವೇಶದ ಗೇಟನ್ನು ಹೊರಗಿನಿಂದ ಮುಚ್ಚಿದ ಬಳಿಕ ಕಾಲೇಜು ಆವರಣದಲ್ಲಿದ್ದ ವಿದ್ಯಾರ್ಥಿಗಳು ಪೊಲೀಸರತ್ತ ಕಲ್ಲು ತೂರಾಟ ನಡೆಸಿದರು ಹಾಗೂ ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಹಾಗೂ ವಿದ್ಯಾರ್ಥಿಗಳು ತರಗತಿಗೆ ಹಿಂದಿರುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘‘ಸುಮಾರು 150 ಮಂದಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದಿಂದ ಹೊರಬಂದು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ ಸಂದರ್ಭ 30 ಸೆಕೆಂಡ್‌ಗಳ ಕಾಲ ಕಲ್ಲು ತೂರಾಟ ನಡೆಯಿತು’’ ಎಂದು ಲಕ್ನೋ ಪೊಲೀಸ್ ಅಧೀಕ್ಷಕ ಕಲಾನಿಧಿ ನೈಥಾನಿ ತಿಳಿಸಿದ್ದಾರೆ.

2014 ಡಿಸೆಂಬರ್ 31ರಂದು ಅಥವಾ ಅದಕ್ಕಿಂತ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದ ಹಿಂದೂ, ಕ್ರಿಶ್ಚಿಯನ್, ಸಿಕ್ಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಈ ನಾಗರಿಕತ್ವ ಕಾಯಿದೆ ಭೌರತೀಯ ಪೌರತ್ವ ನೀಡುತ್ತದೆ.

ಪೌರತ್ವ ತಿದ್ದುಪಡಿ ಮಸೂದೆ ಕಳೆದ ವಾರ ಸಂಸತ್ತಿನಲ್ಲಿ ಅಂಗೀಕಾರ ನೀಡಲಾಗಿತ್ತು. ನವೆಂಬರ್ 12ರಂದು ಈ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕುವ ಮೂಲಕ ಅದು ಕಾಯ್ದೆಯಾಗಿ ಅಸ್ತಿತ್ವಕ್ಕೆ ಬಂದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News