ಉಡುಪಿ: ಡಿ.17ರಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ
Update: 2019-12-16 20:36 IST
ಉಡುಪಿ, ಡಿ.16: ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧ ವಾಗಿ ಹಾಗೂ ಜಾತ್ಯತೀತ ಹಂದರವನ್ನು ನಾಶ ಮಾಡಿ ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಹಾಗೂ ಸಹಭಾಗಿ ಸಂಘ ಟನೆಗಳ ವತಿಯಿಂದ ಡಿ.17ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನಾ ಸಭೆಯಲ್ಲಿ ಹೋರಾಟಗಾರ ಶಿವಸುಂದರ್, ಚಿಂತಕರು ಹಾಗೂ ಗಣ್ಯರು ಭಾಗವಹಿಸಲಿರುವರು. ದೇಶದ ಭದ್ರತೆಯ ದೃಷ್ಟಿಯಿಂದಲೂ ಹಾನಿಕಾರಕವಾದ ಈ ಮಸೂದೆ ವಿರುದ್ಧದ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳ ಬೇಕು ಎಂದು ಪ್ರತಿಭಟನಾ ಸಂಚಾಲಕ ಹುಸೈನ್ ಕೋಡಿಬೆಂಗ್ರೆ ತಿಳಿಸಿದ್ದಾರೆ.