ಕಲ್ಲಡ್ಕ ಶಾಲೆಯಲ್ಲಿ ಮತೀಯತೆಗೆ ಪ್ರೋತ್ಸಾಹ: ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
Update: 2019-12-16 20:37 IST
ಮಂಗಳೂರು, ಡಿ.16: ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಬಾಬರಿ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತೀಯತೆಗೆ ಪ್ರೋತ್ಸಾಹ ನೀಡಿದಂತಾಗಿದೆ. ಶಾಲಾಡಳಿತ ಮಂಡಳಿಯ ಈ ಕ್ರಮವು ಖಂಡನೀಯ ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ.ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಂದು ನಿರ್ದಿಷ್ಟ ಸಮುದಾಯದ ಮಕ್ಕಳ ಮೇಲೆ ದ್ವೇಷ ಸಾಧಿಸಲು ಮತ್ತು ನಿರ್ದಿಷ್ಟ ಸಮುದಾಯದ ಪ್ರಾರ್ಥನಾ ಕೇಂದ್ರವನ್ನು ಸಂಶಯದಿಂದ ನೋಡುವಂತಹ ಸನ್ನಿವೇಶವನ್ನು ವಿದ್ಯಾರ್ಥಿಗಳಲ್ಲಿ ಸೃಷ್ಟಿಸುವ ಪ್ರಯತ್ನ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಈ ನಡೆಯು ಅಸಂವಿಧಾನಿಕವಾಗಿದ್ದು, ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.