ಐಸಿವೈಎಂ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ, ಡಿ.16: ಉದ್ಯಾವರದ ಸಂತ ಫ್ರಾನ್ಸಿಸ್ ಜೇವಿಯರ್ ದೇವಾ ಲಯ ವ್ಯಾಪ್ತಿಗೆ ಒಳಪಟ್ಟ ಭಾರತೀಯ ಕಥೋಲಿಕ್ ಯುವ ಸಂಚಲನ ಐಸಿವೈಎಂ ಇದರ ಸುವರ್ಣ ಮಹೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ ಆಮಂತ್ರಣ ಪತ್ರಿಕೆಯನ್ನು ಉಡುಪಿ ಶೋಕಾ ಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೋನ್ಸಾ ರವಿವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ, ಐಸಿವೈಎಂ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕ ಫಾ.ಸ್ಟ್ಯಾನಿ ಬಿ.ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೋರನ್ನ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಮೈಕಲ್ ಡಿಸೋಜ, ಕಾರ್ಯದರ್ಶಿ ಡೋರಾ ಅರೊಜ, ಕೋಶಾಧಿಕಾರಿ ರೋಶನ್ ಕ್ರಾಸ್ತಾ, ಐಸಿವೈಎಂ ಅಧ್ಯಕ್ಷ ರೊಯಲ್ ಕಾಸ್ತೆಲಿನೋ, ಕಾರ್ಯದರ್ಶಿ ಪ್ರಿಯಾಂಕಾ ಉಪಸ್ಥಿತರಿದ್ದರು. ಕಾರ್ಯಕ್ರಮಗಳ ಸಂಚಾಲಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯ ಕ್ರಮ ನಿರೂಪಿಸಿದರು.
ಜ.19ರಂದು ನಡೆಯುವ ಸುವರ್ಣ ಮಹೋತ್ಸವವನ್ನು ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಉದ್ಘಾಟಿಸಲಿರುವರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅಧ್ಯಕ್ಷತೆ ವಹಿಸಲಿರುವರು ಎಂದು ಐಸಿವೈಎಂ ಸುವರ್ಣ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.