×
Ad

ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ವಿವಿಧ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

Update: 2019-12-16 21:59 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.15: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಡಿ.19ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಸಮಾಜವಾದಿ ಸಮಾಗಮ ಸಂಘಟನೆಯ ಸಂಚಾಲಕ ಆನಂದ್ ಕುಮಾರ್ ತಿಳಿಸಿದ್ದಾರೆ.

ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆದ ಸಮಾವೇಶದಲ್ಲಿ ರಾಷ್ಟ್ರದಲ್ಲಿ ಆಗುತ್ತಿರುವ ಅನ್ಯಾಯ, ಹಿಂಸಾಚಾರ, ಅಭದ್ರತೆಯ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಗ್ರಾಮೀಣ ಜನರ ಬೇಡಿಕೆಗಳ ಕುರಿತ ಗ್ರಾಮೀಣ ಭಾರತ ಬಂದ್‌ಗೆ ನಮ್ಮ ಸಂಘಟನೆಯು ಬೆಂಬಲ ನೀಡುತ್ತದೆ. ಸಂವಿಧಾನದ ಮೌಲ್ಯಗಳ ಬಗ್ಗೆ ಜಾಗತಿ ಮೂಡಿಸಲು 2020ರ ಜನವರಿ 30ರಿಂದ ಭಾರತ ಯಾತ್ರೆಯನ್ನು ಕೈಗೊಳ್ಳಲಿದ್ದೇವೆ.  9 ರಾಜ್ಯಗಳಲ್ಲಿ ಕೈಗೊಳ್ಳುವ ಈ ಯಾತ್ರೆಯ ಅಧ್ಯಕ್ಷತೆಯನ್ನು ಹಿರಿಯ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ವಹಿಸಲಿದ್ದಾರೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಮೈಕೇಲ್ ಬಿ. ಫರ್ನಾಂಡಿಸ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಸಂಘಟನೆಯ ಸದಸ್ಯರಾದ ರಾಜ್‌ಕುಮಾರ್ ಜೈನ್, ಸುಂದರ್, ರಮಾಶಂಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News