ಹಸಿರು ನಿಶಾನೆ ತೋರಿ ತಿಂಗಳುಗಳೇ ಕಳೆದರೂ ಇನ್ನೂ ಆರಂಭವಾಗಿಲ್ಲ ರೈಲು ಸಂಚಾರ !
Update: 2019-12-16 23:10 IST
ಬೆಂಗಳೂರು, ಡಿ.16: ಕೋಲಾರ-ವೈಟ್‌ಫೀಲ್ಡ್ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿ ತಿಂಗಳುಗಳೇ ಕಳೆದಿವೆ. ಆದರೆ, ಜನಪ್ರತಿನಿಧಿಗಳ ನಿರ್ಲಕ್ಷದಿಂದ ರೈಲು ಸಂಚಾರ ಆರಂಭವಾಗಿಲ್ಲ.
ಕನ್ನಡ ರಾಜ್ಯೋತ್ಸವ ದಿನದಿಂದಲೇ ಪ್ರತಿದಿನ 7.30 ಕ್ಕೆ ಕೋಲಾರದಿಂದ ಹೊರಟು ಶ್ರೀನಿವಾಸಪುರ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಯಲಹಂಕ, ವೈಟ್‌ಫೀಲ್ಡ್ ಮಾರ್ಗದಲ್ಲಿ ಸಂಚರಿಸಬೇಕಿತ್ತು. ಸಂಜೆ 4.30 ಕ್ಕೆ ವೈಟ್‌ಫೀಲ್ಡ್‌ನಿಂದ ಹೊರಟು ಕೋಲಾರಕ್ಕೆ ಮರಳಬೇಕಿತ್ತು. ಆದರೆ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಇನ್ನೂ ಚಾಲನೆ ಸಿಕ್ಕಿಲ್ಲ.