ಬಿಜೆಪಿಯಲ್ಲಿ ಈಗ ಬೆಂಕಿ ಆರಂಭವಾಗಿದೆ: ಎಚ್.ಎಂ.ರೇವಣ್ಣ

Update: 2019-12-17 12:45 GMT

ಬೆಂಗಳೂರು, ಡಿ.17: ಉಪಮುಖ್ಯಮಂತ್ರಿ ಸ್ಥಾನ ಕುರಿತು ಬಿಜೆಪಿಯಲ್ಲಿ ಈಗ ಬೆಂಕಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕವಾಗಲಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ಉಮೇಶ್ ಕತ್ತಿ ಈಗಾಗಲೇ ಕತ್ತಿ ಮಸೆಯುತ್ತಿದ್ದಾರೆ. ಶ್ರೀರಾಮುಲು ಸಹ ಸಚಿವ ಸಂಪುಟ ಸಭೆ ಸೇರಿದಂತೆ ಯಾವ ಸಭೆಗೂ ಹೋಗುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿಯಲ್ಲಿ ವಿವಿಧ ಕತೆಗಳಿವೆ. ಹೊಸ ಶಾಸಕರಾಗಿ ಆಯ್ಕೆಯಾಗಿರುವವರು ಅಧಿಕಾರ ಬೇಕು ಎಂದು ಹೇಳುತ್ತಿದ್ದಾರೆ ಎಂದ ಅವರು, ಅಧಿಕಾರ ಸಿಗದೆ ಇದ್ದರೆ ಮತ್ತೆ ಅವರ ಕೆಲಸ ಪ್ರಾರಂಭ ಮಾಡುತ್ತಾರೆ ಎಂದು ತಿಳಿಸಿದರು.

ಜನರ ಅಭಿಪ್ರಾಯಕ್ಕೆ ನಾವು ಮನ್ನಣೆ ಕೊಡುತ್ತೇವೆ. ವಿರೋಧ ಪಕ್ಷ ಮಾಡುವ ಕೆಲಸ ನಾವು ಮಾಡುತ್ತೇವೆ. ತಕ್ಷಣಕ್ಕೆ ಕಾಂಗ್ರೆಸ್ ಪಕ್ಷ ಸರಕಾರ ರಚಿಸುವ ಯಾವುದೇ ಪ್ರಯತ್ನ ಮಾಡುವುದಿಲ್ಲ ಎಂದು ರೇವಣ್ಣ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News