ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-12-17 17:03 GMT

ಬೆಂಗಳೂರು, ಡಿ.17: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪೂವಿತಾ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ಭೂಬಾಲನ್‌ರನ್ನು ವರ್ಗಾವಣೆ ಮಾಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಯೋಜನಾ ನಿರ್ದೇಶಕರನ್ನಾಗಿ ರಾಮಚಂದ್ರನ್ ಹಾಗೂ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News