ನಿರ್ಭಯಾ ಪ್ರಕರಣದ ದೋಷಿ ಅಕ್ಷಯಕುಮಾರ್ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2019-12-18 08:38 GMT

ಹೊಸದಿಲ್ಲಿ, ಡಿ. 18: ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ  ಮತ್ತು ಕೊಲೆ ಪ್ರಕರಣದ  ಅಪರಾಧಿ ಅಕ್ಷಯ್ ಕುಮಾರ್ ಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆ ತೀರ್ಪು ಪರಿಶೀಲಿಸುವಂತೆ  ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಇಂದು ಅಕ್ಷಯ ಕುಮಾರ್ ಪುನರ್ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಇದರೊಂದಿಗೆ ಅಕ್ಷಯ್ ಕುಮಾರ್ ಗೆ  ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ತೀರ್ಪು ಪರಿಶೀಲನೆಗೆ ಯಾವುದೇ ಕಾರಣಗಳಿಲ್ಲ. ಕೇಸ್ ನ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗಿಲ್ಲ. ಹೀಗಾಗಿ ಅಕ್ಷಯ್ ಕುಮಾರ್ ವಾದಕ್ಕೆ ಮನ್ನಣೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2012ರ ಡಿಸೆಂಬರ್ 16ರಂದು   ಚಲಿಸುತ್ತಿರುವ ಬಸ್ಸಿನಲ್ಲಿ 23 ವರ್ಷದ ಯುವತಿ ನಿರ್ಭಯಾಳ ಮೇಲೆ ಆರು ಮಂದಿ  ಆರೋಪಿಗಳು ಅತ್ಯಾಚಾರ ನಡೆಸಿ , ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ  ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರದ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ   ಸಹ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 28ರಂದು ಮೃತಪಟ್ಟಿದ್ದಳು.

ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿಯ  ವಿಶೇಷ ತ್ವರಿತ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News