ಡಿ.21ರವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ: ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ
Update: 2019-12-18 21:57 IST
ಮೈಸೂರು, ಡಿ.18: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇಶ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿರುವ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಮತೀಯ ಗಲಭೆ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಂಭವವಿದ್ದು, ಅದನ್ನು ತಪ್ಪಿಸಲು ಡಿ.19ರ ಬೆಳಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿ 12 ಗಂಟೆ ವರೆಗೆ ಮೈಸೂರು ನಗರದಲ್ಲಿ 144ನೇ ಸೆಕ್ಷನ್ ಜಾರಿಗೊಳಿಸಿ ಪ್ರತಿಭಟನೆ, ಸಭೆ, ಸಮಾರಂಭ, ಬೈಕ್ ರ‍್ಯಾಲಿ, ಪ್ರತಿಭಟನೆ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.