ಬೆಂಗಳೂರು ಸೇರಿ ರಾಜ್ಯದ ಹಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿ
Update: 2019-12-18 23:25 IST
ಬೆಂಗಳೂರು, ಡಿ.18: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಬೆಂಗಳೂರಿನಲ್ಲಿ ಡಿ.19ರ ಬೆಳಗ್ಗೆ ಆರು ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿ ಬೆಂಗಳೂರಿನಲ್ಲಿ ಡಿ.19ರಿಂದ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಈಗಾಗಲೇ ರಾಜ್ಯದ ಮಂಗಳೂರು, ಮೈಸೂರು, ಕಲಬುರಗಿ, ಉಡುಪಿ ಹಾಗೂ ಇನ್ನಿತರ ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.