ಪೌರತ್ವ ಕಾಯ್ದೆ ವಿರೋಧಿಸಿ ಅಡ್ಡೂರಿನಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

Update: 2019-12-18 18:43 GMT

ಬಜ್ಪೆ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಅಡ್ಡೂರಿನಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ವಿಧಿಸಲಿ. ನಾವು ನ್ಯಾಯ ಪಾಲನೆ ಮಾಡುವವರು. ಅನ್ಯಾಯಕ್ಕೆ ಪ್ರೋತ್ಸಾಹ ಕೊಡದಿರಿ. ಅನ್ಯಾಯಗಳನ್ನು ಮಾಡುವವರಿಗೆ ಶಿಕ್ಷೆ ವಿಧಿಸಿ. ದಬ್ಬಾಳಿಕೆ ಸರಿಯಲ್ಲ. ಇದರಿಂದಾಗಿ ನಾವು ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಅಡ್ಡೂರಿನಲ್ಲಿ ಪೊಲೀಸ್ ಸರ್ಪಗಾವಲನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News