ಬೆಳ್ತಂಗಡಿ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧದ ಇಂದಿನ ಸಿಪಿಎಂ ಪ್ರತಿಭಟನೆ ಡಿ.23ಕ್ಕೆ ಮುಂದೂಡಿಕೆ

Update: 2019-12-19 03:33 GMT

ಬೆಳ್ತಂಗಡಿ, ಡಿ.19: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಗುರುವಾರ(ಡಿ.19) ಬೆಳಗ್ಗೆ 10:30ಕ್ಕೆ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ದ.ಕ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಸಂವಿಧಾನ ವಿರೋಧಿ ಈ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸಿಪಿಎಂ ವತಿಯಿಂದ ಡಿ.23ರಂದು ಬೆಳಗ್ಗೆ 10:30ಕ್ಕೆ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ತಾಲೂಕು ಸಮಿತಿ ಕಾರ್ಯದರ್ಶಿ ನ್ಯಾಯವಾದಿ ಶಿವಕುಮಾರ್ ಎಸ್.ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News