ಪ್ರತಿಭಟನಾಕಾರರ ಮೇಲೆ ಗುಂಡು ಹಾರಾಟ ಖಂಡನೀಯ : ಸಲಾಹುದ್ದೀನ್ ಅಬ್ದುಲ್ಲಾ

Update: 2019-12-19 17:18 GMT

ಉಡುಪಿ: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಗುಂಡೇಟಿಗೆ ಇಬ್ಬರು ಬಲಿಯಾಗಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪತ್ರಿಕಾ ವಕ್ತಾರ ಸಲಾಹುದ್ದೀನ್ ಅಬ್ದುಲ್ಲಾ ತಿಳಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಪ್ರತಿಭಟನಾಕಾರರನ್ನು ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು  ಸಂಘರ್ಷಕ್ಕೆ ಕಾರಣವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ . ಪೋಲೀಸರ ಪೂರ್ವಗ್ರಹ ಪೀಡಿತ ಧೋರಣೆ  ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ. ಹಲವೆಡೆ ಪೊಲೀಸರು ಅಮಾಯಕರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರುಗಳು ಬಂದಿವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆದು ಸತ್ಯಾಂಶ ಹೊರಬರಬೇಕಾಗಿದೆ ಹಾಗು ಇದಕ್ಕೆ ಹೊಣೆಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಗೋಲಿಬಾರ್ ಗೆ ಬಲಿಯಾದವರ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು. ಗಾಯಾಳುಗಳಿಗೆ ಚಿಕಿತ್ಸೆಯ ವೆಚ್ಚವನ್ನು ಸರಕಾರ ಭರಿಸಬೇಕು. ಈ ಸಂದರ್ಭದಲ್ಲಿ ಜನರು ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಬೇಕು ಎಂದು ಸಲಾಹುದ್ದೀನ್ ಅಬ್ದುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News