ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸರಕಾರ ಸೂಕ್ತ ಪರಿಹಾರ ನೀಡಲು ಮಸೂದ್ ಒತ್ತಾಯ
ಮಂಗಳೂರು : ಗುರುವಾರ ನಡೆದ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಗಾಯಗೊಂಡವರ ಚಿಕಿತ್ಸೆಯ ವೆಚ್ಚ ಭರಿಸಬೇಕು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಮುಹಮ್ಮದ್ ಮಸೂದ್ ಒತ್ತಾಯಿಸಿದ್ದಾರೆ.
ನಗರದ ಕದ್ರಿ ಠಾಣೆಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಇಂತಹ ಘಟನೆಯು ನಡೆಯಬಾರದಿತ್ತು. ಆದರೆ ಇಬ್ಬರು ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ಪರಿಹಾರ ಸಿಗಲೇಬೇಕು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದಕ್ಕೆ ಒತ್ತು ನೀಡಬೇಕು. ಯಾರೂ ಪ್ರಚೋದನಗೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಪೊಲೀಸರು ಕೂಡ ರಾತ್ರೋ ರಾತ್ರಿ ಅಮಾಯಕರ ಮನೆಗೆ ನುಗ್ಗಿ ಹಿಂಸಿಸಬಾರದು. ಈ ಬಗ್ಗೆ ಪೊಲೀಸ್ ಆಯುಕ್ತರಲ್ಲೂ ಖುದ್ದು ಮಾಡಿದ್ದೇನೆ ಎಂದು ಮಸೂದ್ ಹೇಳಿದರು.
ಈ ಸಂದರ್ಭ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳಾದ ಎಸ್.ಎಂ.ರಶೀದ್ ಹಾಜಿ, ಹನೀಫ್ ಹಾಜಿ ಬಂದರ್, ಮನ್ಸೂರ್ ಅಹ್ಮದ್ ಆಝಾದ್, ಡಿಎಂ ಅಸ್ಲಂ, ಅಹ್ಮದ್ ಬಾವಾ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.