×
Ad

ಪೇಜಾವರ ಸ್ವಾಮೀಜಿ ಆರೋಗ್ಯದಲ್ಲಿ ಸುಧಾರಣೆ: ಪೇಜಾವರ ಮಠದ ಆಪ್ತರಿಂದ ಹೇಳಿಕೆ

Update: 2019-12-20 13:49 IST

ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಸ್ವಾಮೀಜಿಯ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ ಎಂದು ಪೇಜಾವರ ಮಠದ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದರು.

ಮಣಿಪಾಲ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೇಜಾವರ ಶ್ರೀಗಳು ನ್ಯುಮೋನಿಯಾ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ದಾಖಲಾಗಿದ್ದಾರೆ. ಡಾ. ಸುಧಾ ವಿದ್ಯಾ ಸಾಗರ್ ನೇತೃತ್ವದ ವೈದ್ಯಕೀಯ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದೆ. ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಹೇಳಿದರು. ಭಕ್ತರು, ಅಭಿಮಾನಿ ಆತಂಕಕ್ಕೆ ಒಳಗಾಗಬಾರದು. ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ತಿಳಿಸಿದರು.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಮುಖ್ಯಮಂತ್ರಿ ಯಡಿಯೂರಪ್ಪ  ದೂರವಾಣಿ  ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಸರಗೋಡು ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News