ಪೇಜಾವರ ಶ್ರೀ ಬಗ್ಗೆ ಸುಳ್ಳು ಮಾಹಿತಿ ಹರಡಿದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ
Update: 2019-12-20 20:56 IST
ಉಡುಪಿ, ಡಿ. 20: ಪೇಜಾವರ ಸ್ವಾಮೀಜಿಯ ಅನಾರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪಸರಿಸುತ್ತಿರುವ ಅಸಮರ್ಪಕ ವಿಷಯಗಳನ್ನು ಸಾರ್ವಜನಿಕರು ಪರಿಗಣಿಸದೆ, ಮಣಿಪಾಲ ಕೆಎಂಸಿ ವೈದ್ಯಾಧಿಕಾರಿಗಳು ನೀಡುವ ಮಾಹಿತಿಯನ್ನು ಮಾತ್ರವೇ ಸತ್ಯ ಎಂದು ತಿಳಿದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವಿಚಾರಗಳನ್ನು ಪಸರಿಸುವುದು ಕಾನೂನು ಬಾಹಿರವಾಗಿದ್ದು, ಇದರಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಈ ವಿಚಾರದಲ್ಲಿ ಯಾವುದೇ ಸುಳ್ಳು ಮಾಹಿತಿಯನ್ನು ಯಾರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಡ ಬಾರದು. ಅಂತಹ ಸುಳ್ಳು ಮಾಹಿತಿ ನೀಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.