×
Ad

ರಾಜ್ಯ ನಾಯಕರ ಬಂಧನ : ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ

Update: 2019-12-20 21:03 IST

ಉಡುಪಿ, ಡಿ. 20: ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟ ಅಮಾಯಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲು ಬಂದ ರಾಜ್ಯ ಕಾಂಗ್ರೆಸ್ ಮುಖಂಡರಾದ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಎಸ್. ಉಗ್ರಪ್ಪ, ಎಸ್.ಆರ್.ಪಾಟೀಲ್, ಎಂ.ಬಿ. ಪಾಟೀಲ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಪೋಲಿಸರು ವಿಮಾನ ನಿಲ್ದಾಣದಿಂದಲೇ ವಶಕ್ಕೆ ಪಡೆದಿರುವುದು ಕಾನೂನು ಬಾಹಿರ. ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷ ಸರಕಾರದ ಈ ಕ್ರಮವನ್ನು ಖಂಡಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News