ಮಂಗಳೂರು ಗೋಲಿಬಾರ್‌ಗೆ ತೀವ್ರ ಖಂಡನೆ
ಮಂಗಳೂರು, ಡಿ.20: ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯನ್ನು ನಿಯಂತ್ರಿಸುವ ಬದಲು ಪ್ರತಿಭಟನಾಕಾರರು ಮತ್ತು ಪತ್ರಕರ್ತರ ಮೇಲೆ ಲಾಠಿ ಚಾರ್ಜ್ ಮತ್ತು ಗೋಲಿಬಾರ್ ನಡೆಸಿರುವುದನ್ನು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಹಾಗೂ ಜಿಲ್ಲಾ ಸಂಯುಕ್ತ ಜಮಾಅತ್ ತೀವ್ರವಾಗಿ ಖಂಡಿಸಿದೆ.
ಸಣ್ಣ ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರಲು ಅಸಾಧ್ಯವಾದ ಪೊಲೀಸ್ ಕಮಿಷನರ್‌ನಿಂದ ಮಂಗಳೂರು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಅಮಾಯಕ ಇಬ್ಬರ ಯುವಕರ ಬಲಿಗೆ ಪೊಲೀಸ್ ಆಯುಕ್ತರೇ ನೇರ ಕಾರಣ. ಆದುದರಿಂದ ಸರಕಾರ ಅವರನ್ನು ವಜಾಗೊಳಿಸಬೇಕು ಮತ್ತು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥ ಪೋಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಬೇಕಾದ ಚಿಕಿತ್ಸೆ ಯನ್ನು ಸರಕಾರವೇ ನೀಡಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಹಾಗೂ ಜಿಲ್ಲಾ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕವಲ್ಕಟ್ಟ ಪ್ರಕಟಣೆ ಯಲ್ಲಿ ಆಗ್ರಹಿಸಿದ್ದಾರೆ.