ಮಂಗಳೂರು ಕರ್ಫ್ಯೂ: ಜನಜೀವನ ಅಸ್ತವ್ಯಸ್ತ

Update: 2019-12-20 18:23 GMT

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಗುರುವಾರ ಘರ್ಷಣೆ ನಡೆದು ಹಿಂಸಾಚಾರಕ್ಕೀಡಾಗಿದ್ದ ಮಂಗಳೂರಿನಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಶುಕ್ರವಾರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಗುರುವಾರ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು ಮತ್ತು 6 ಮಂದಿ ಗಾಯಗೊಂಡಿದ್ದರು. 38ಕ್ಕೂ ಅಧಿಕ ಮಂದಿ ಲಾಠಿಏಟು, ಕಲ್ಲೇಟಿನಿಂದ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಡಿ.22ರ ಮಧ್ಯರಾತ್ರಿಯವರೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಿದ್ದರು. ಇದರಿಂದ ಮಂಗಳೂರಿನಲ್ಲಿ ಶುಕ್ರವಾರ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. ಆದರೆ ಎಲ್ಲೂ, ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor