×
Ad

ಪೇಜಾವರ ಸ್ವಾಮೀಜಿ ಆರೋಗ್ಯ ಸ್ಥಿರ : ಡಾ. ಅವಿನಾಶ್ ಶೆಟ್ಟಿ

Update: 2019-12-21 11:37 IST

ಉಡುಪಿ, ಡಿ. 21: ‘ಚಿಕಿತ್ಸೆಯಲ್ಲಿರುವ ಪೇಜಾವರ ಸ್ವಾಮೀಜಿಯ ಸ್ಥಿತಿ ಗಂಭೀರವಾಗಿದ್ದರೂ ಆರೋಗ್ಯ ಸ್ಥಿರವಾಗಿದೆ’ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಡಿ. 21ರಂದು ಬೆಳಗ್ಗೆ 10.30ಕ್ಕೆ ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾದ ಪೇಜಾವರ ಸ್ವಾಮೀಜಿಯ ಆರೋಗ್ಯ ಕುರಿತ ಬುಲೆಟಿನ್‌ನಲ್ಲಿ ಈ ವಿಚಾರವನ್ನು ಪ್ರಕಟಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆ ದಾಖಲಾಗಿದ್ದ ಸ್ವಾಮೀಜಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ಅವಿನಾಶ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News