ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡಿದ್ದೇನೆ : ಸಿಎಂ
Update: 2019-12-21 13:28 IST
ಮಂಗಳೂರು : ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರದ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದರು
ಹಿಂಸಾಚಾರ ಘಟನೆಗೆ ಬಿಜೆಪಿ ವೈಫಲ್ಯ ಎಂದು ಹೇಳಲಾಗುತ್ತಿದ್ದು, ಆದರೆ ಜನರಿಗೆ ಯಾರ ವೈಫಲ್ಯ ಎಂದು ಗೊತ್ತಿರುವುದಾಗಿ ಅವರು ತಿಳಿಸಿದರು.
ನಂತರ ಸಿಎಂ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ಸಂದರ್ಭ ಮಂಗಳೂರು ಪೊಲೀಸ್ ಆಯುಕ್ತರನ್ನು ಸಭೆಯಿಂದ ಹೊರಗಿಟ್ಟು ಚರ್ಚಿಸಲಾಗಿದೆ ಎಂಬ ಮಾಹಿತಿ ದೊರಕಿದೆ.