ಕಾಣಿಕೆ ಡಬ್ಬಿ ಕಳವು
Update: 2019-12-21 21:01 IST
ಕುಂದಾಪುರ, ಡಿ.21: ಕುಂದಾಪುರ ಸರಕಾರಿ ಆಸ್ಪತ್ರೆಯ ಆವರಣದಲ್ಲಿರುವ ನಂದಿಕೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಕಳ್ಳರು ಡಿ.19ರಂದು ರಾತ್ರಿ ವೇಳೆ ಒಡೆದು ಅದರಲ್ಲಿದ್ದ 3,000 ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೇವಳ ಸಮಿತಿ ಅಧ್ಯಕ್ಷ ಡಾ.ವಿಜಯ ಶಂಕರ್ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.