ಪರಿಸ್ಥಿತಿ ಅನುಸಾರ ನಿಷೇಧಾಜ್ಞೆ ರದ್ದು: ಭಾಸ್ಕರ್ ರಾವ್

Update: 2019-12-21 15:37 GMT

ಬೆಂಗಳೂರು, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ಶಾಂತಿಯುತವಾಗಿಯೇ ಪ್ರತಿಭಟನೆ ನಡೆದಿದ್ದು, ಇಂದಿನ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ರದ್ದುಗೊಳಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಇಂದಿನ ಪರಿಸ್ಥಿತಿ ನೋಡಿಕೊಂಡು 144 ಸೆಕ್ಷನ್ ರದ್ದುಪಡಿಸುವ ಕುರಿತು ಮಾಹಿತಿ ನೀಡುತ್ತೇವೆ ಎಂದರು.

ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ವಶಕ್ಕೆ ಪಡೆದ ಎಲ್ಲರನ್ನೂ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಕೆಲವರು ಕಾಯ್ದೆ ತಿದ್ದುಪಡಿ ಜಾರಿಗೆ ಒತ್ತಾಯಿಸಲು ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಆದರೆ, ಅವರಿಗೂ ಅನುಮತಿ ನೀಡಿಲ್ಲ. ವರ್ಷದ ಆರಂಭದಿಂದ ಇಲ್ಲಿಯವರೆಗೂ ಶಾಂತಿಯುತವಾಗಿದ್ದು, ವರ್ಷದ ಕೊನೆಯಲ್ಲೂ ಯಾವುದೇ ಅಹಿತಕರ ಘಟನೆ ನಡೆಯಬಾರದು.
-ಭಾಸ್ಕರ್ ರಾವ್, ನಗರ ಪೊಲೀಸ್ ಆಯುಕ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News