ದೇಶದಲ್ಲಿ ವಿಶ್ವಾಸ ಮರುಸ್ಥಾಪಿಸಲು ಸಿಎಎ ಹಿಂದೆಗೆಯಿರಿ: ರಾಮಚಂದ್ರ ಗುಹಾ

Update: 2019-12-21 16:09 GMT

ಬೆಂಗಳೂರು, ಡಿ.21: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯು ಅನೈತಿಕವಾಗಿದೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಶನಿವಾರ ಇಲ್ಲಿ ಬಣ್ಣಿಸಿರುವ ಖ್ಯಾತ ಇತಿಹಾಸ ತಜ್ಞ ಹಾಗೂ ಲೇಖಕ ರಾಮಚಂದ್ರ ಗುಹಾ ಅವರು,ಯಾವುದೇ ವಿವೇಚನಾಯುತ ಮತ್ತು ನ್ಯಾಯಯುತ ಸರಕಾರವು ಇಂತಹ ಕಾಯ್ದೆಯನ್ನು ಹಿಂದೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ದೇಶದಲ್ಲಿ ವಿಶ್ವಾಸವನ್ನು ಮರುಸ್ಥಾಪಿಸಲು ಮತ್ತು ಉದ್ವಿಗ್ನತೆಯನ್ನು ಶಮನಿಸಲು ಎನ್‌ಆರ್‌ಸಿಯನ್ನು ಹಿಂದೆಗೆದುಕೊಳ್ಳುವುದು ಮೊದಲ ಅಗತ್ಯ ಹೆಜ್ಜೆಯಾಗಿದೆ ಎಂದೂ ಅವರು ಶನಿವಾರ ಟ್ವೀಟಿಸಿದ್ದಾರೆ.

ಗುರುವಾರ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಬೆಂಗಳೂರಿನ ಪುರಭವನದ ಬಳಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡವರಲ್ಲಿ ಗುಹಾ ಕೂಡ ಸೇರಿದ್ದರು.

ಪ್ರಜೆಗಳ ಪ್ರಜಾಸತ್ತಾತ್ಮಕ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅವಕಾಶ ನೀಡದಿರುವುದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದೂ ಗುಹಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News