ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿಗಳ ಮೃತದೇಹ ಮರು ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಆದೇಶ

Update: 2019-12-21 16:39 GMT

ಹೈದರಾಬಾದ್, ಡಿ. 21: ಹೈದರಾಬಾದ್ ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಮಾಡಿದ್ದ ಡಿಸೆಂಬರ್ 6ರಂದು ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದ ನಾಲ್ವರು ಆರೋಪಿಗಳ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆಯನ್ನು 48 ಗಂಟೆಗಳ ಒಳಗೆ ನಡೆಸುವಂತೆ ತೆಲಂಗಾಣ ಉಚ್ಚ ನ್ಯಾಯಾಲಯ ಶನಿವಾರ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

 ಡಿಸೆಂಬರ್ 23ರಂದು 5 ಗಂಟೆಯ ಒಳಗೆ ಹೊಸದಿಲ್ಲಿಯ ಏಮ್ಸ್‌ನ ವಿಧಿವಿಜ್ಞಾನ ತಜ್ಞರ ತಂಡ ನಾಲ್ವರು ಆರೋಪಿಗಳ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ ಹಾಗೂ ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರ್ದೇಶಿಸಿದೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಅವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಬೇಕು ಎಂದು ಪೀಠ ರಾಜ್ಯ ಸರಕಾರದ ಪರವಾಗಿ ಹಾಜರಿದ್ದ ವೈದ್ಯಕೀಯ ಹಾಗೂ ಆರೋಗ್ಯ ಇಲಾಖೆಯ ಪ್ರಾಥಮಿಕ ಕಾರ್ಯದರ್ಶಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News