×
Ad

ಗೋಲಿಬಾರ್ ಗೆ ಇಬ್ಬರು ಬಲಿ ಪ್ರಕರಣ : ಬ್ಯಾರೀಸ್ ವೆಲ್ಫೇರ್ ಫೋರಮ್ ಖಂಡನೆ

Update: 2019-12-21 23:33 IST

ಅಬುಧಾಬಿ : ಎನ್ಆರ್ ಸಿ ಮತ್ತು ಸಿಎಎ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಇಬ್ಬರು ಯುವಕರು ಬಲಿಯಾಗಿರುವುದನ್ನು ಬ್ಯಾರೀಸ್ ವೆಲ್ಫೇರ್ ಫೋರಮ್, ಅಬುಧಾಬಿ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಎಸ್ಕ್ಯೂಟಿವ್ ಕಮಿಟಿ ಖಂಡಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಬಾರದು ಎಂಬ ಮುಖ್ಯಮಂತ್ರಿಗಳ ಆದೇಶವನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲೇ ಬೇಕಾದ ಸನ್ನಿವೇಶ ಇರಲಿಲ್ಲ ಎಂಬುದು ಅಲ್ಲಿನ ಬೆಳವಣಿಗೆಗಳು ಮತ್ತು ಪ್ರತ್ಯಕ್ಷದರ್ಶಿ ವಿವರಗಳು ಸ್ಪಷ್ಟಪಡಿಸುತ್ತವೆ. ಆದ್ದರಿಂದ ಸರಕಾರ ಇಡೀ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು  ಮೃತ ಯುವಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಯುವ ಸಮೂಹ ಯಾವುದೇ ಪರಿಸ್ಥಿತಿಯಲ್ಲಿ ಆಕ್ರೋಶಿತರಾಗದೆ ಶಾಂತಿ ಸಂಯಮದೊಂದಿಗೆ ಸನ್ನಿವೇಶವನ್ನು ಎದುರಿಸಬೇಕು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News