ಮಕ್ಕಳ ಹಕ್ಕುಗಳು, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ನ್ಯಾಯಾಧೀಶೆ ಕಾವೇರಿ

Update: 2019-12-22 17:26 GMT

ಉಡುಪಿ, ಡಿ.22: ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆ ಬಗ್ಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಕರೆ ನೀಡಿದ್ದಾರೆ. ಪಟ್ಲದ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಮುಖ ಶಾಲೆಗಳಲ್ಲಿ ಒಂದು ತಿಂಗಳ ಕಾಲ ಆಯೋಜಿಸಲಾಗಿರುವ ಶಾಲಾ ಮಕ್ಕಳಿಗೆ ಸಂಬಂಧಪಟ್ಟ ಕಾಯ್ದೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಮಕ್ಕಳ ಗ್ರಾಮಸಬೆಗಳಲ್ಲಿ ಆದ ನಿರ್ಣಯಗಳನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಬೇಕು. ಅಲ್ಲದೇ ಮಕ್ಕಳ ರಕ್ಷಣೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸದಾ ಇರುತ್ತದೆ. ಏನೇ ಸಮಸ್ಯೆಗಳಿದ್ದರೂ ಮಕ್ಕಳ ಸಹಾಯಾಣಿಗೆ ಕರೆ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಅಣ್ಣಯ್ಯ ನಾಯಕ್ ಹಾಗೂ ಉಡುಪಿ ಮಕ್ಕಳ ಸಹಾಯವಾಣಿಯ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.

ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಶ್ರೀಕಾಂತ ಪ್ರಭು ಸ್ವಾಗತಿಸಿದರು. ಶಿಕ್ಷಕ ಶಾಂತಪ್ಪಮೂಲಂಗಿ ಕಾರ್ಯಕ್ರಮ ನಿರೂಪಿಸಿದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಬಾಕರ ಆಚಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News