ಪೌರತ್ವ ಕಾಯ್ದೆ ವಿರೋಧಿಸಿ ಬ್ರಿಟನ್‌ನಲ್ಲಿ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳು, ಮಾನವಹಕ್ಕು ಸಂಘಟನೆಗಳು ಭಾಗಿ

Update: 2019-12-22 18:10 GMT

ಲಂಡನ್,ಡಿ.22: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ ಮೋದಿ ಸರಕಾರದ ನಿರ್ಧಾರವನ್ನು ವಿರೋಧಿಸಿ ಬ್ರಿಟನ್ ರಾಜಧಾನಿ ಲಂಡನ್‌ನಲ್ಲಿ ಶನಿವಾರ ನೂರಾರು ವಿದ್ಯಾರ್ಥಿಗಳು ಹಾಗೂ ಇತರ ಮಾನವಹಕ್ಕು ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಲಂಡನ್‌ನ ಸಂಸತ್ ಭವನದ ಚೌಕದಲ್ಲಿ ರುವ ಮಹಾತ್ಮಗಾಂಧೀಜಿಯವರ ಜಮಾಯಿಸಿದ ನೂರಾರು ಮಂದಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.

‘ಭಾರತೀಯ ಸಂವಿಧಾನವನ್ನು ರಕ್ಷಿಸಿ’ ಎಂಬ ಸಂದೇಶದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ಭಾರತೀಯ ತ್ರಿವರ್ಣ ಧ್ವಜಗಳನ್ನು ಹಿಡಿದುಕೊಂಡಿದ್ದರು ಹಾಗೂ ಸಿಎಎ ಮತ್ತು ಎನ್‌ಆರ್‌ಸಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸುವ ಭಿತ್ತಿಫಲಕಗಳನ್ನು ಪ್ರದರ್ಶಿಸಿದರು

   ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಾಗರಿಕರು ಹಾಗೂ ಜಾಮಿಯಾ ಮಿಲ್ಲಿಯಾ ವಿವಿ ಮತ್ತು ಅಲಿಗಢ ಮುಸ್ಲಿಮ್ ವಿಶ್ವವಿದ್ಯಾನಿಲಯ (ಎಎಂಯು)ದ ವಿದ್ಯಾರ್ಥಿಗಳ ಜೊತೆ ಏಕತೆಯನ್ನು ಪ್ರದರ್ಶಿಸಲು ಇಲ್ಲಿ ಸೇರಿದ್ದವೆ ಎಂದು ಪ್ರತಿಭಟನಕಾರನೊಬ್ಬ ವರದಿಗಾರರಿಗೆ ತಿಳಿಸಿದ್ದಾನೆ.

 ಕಳೆದ ಒಂದು ವಾರದಿಂದ ಬ್ರಿಟನ್‌ನ ವಿವಿಧೆ ವಿಶ್ವವಿದ್ಯಾನಿಲಯಗಳ ಆವರಣಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಬುಧವಾರದಂದು ಲಂಡನ್‌ನಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಹೊರಭಾಗದಲ್ಲಿ ನೂರಾರು ಮಂದಿ ಸಿಸಿಎ ಹಾಗೂ ಎನ್‌ಸಿಆರ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News