ಭಟ್ಕಳದಲ್ಲಿ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ಆರಂಭ
Update: 2019-12-23 11:00 IST
ಭಟ್ಕಳ, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಆರಂಭಗೊಂಡಿದೆ.
ಇಲ್ಲಿನ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್ ವ- ತಂಝೀಮ್ ನೇತೃತ್ವದಲ್ಲಿ ಇಲ್ಲಿನ ಅಂಜುಮಾನ್ ಶಾಲಾ ಮೈದಾನದಲ್ಲಿ ಈ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಮೊದಲು ಇಲ್ಲಿನ ವೈಭವ್ ಹೋಟೆಲ್ ಬಳಿಯಿಂದ ಪ್ರತಿಭಟನಾ ವೇದಿಕೆಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಈ ಕಾಯ್ದೆಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಚಿಂತಕ, ಅಂಕಣಕಾರ ಶಿವಸುಂದರ್ ಹಾಗೂ ಸಿಪಿಎಂ ಮುಖಂಡ ಕೆ.ರಮೇಶ್ ಮಾತನಾಡುವರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.